ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2022-23ನೇ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಹಾಗೂ 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ಪ್ರಶ್ನೆ ಪತ್ರಿಗಳನ್ನು ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶಗಳನ್ನು ಶಾಲಾ ವಾರು, ಕ್ಲಸ್ಟರ್ ವಾರು, ತಾಲೂಕು ವಾರು ವಿಶ್ಲೇಷಣೆ ಮಾಡಬೇಕು ಎಂದು ಸೂಚಿಸಿದೆ.
ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆಯೇನು ಎಂಬುದನ್ನು ತಿಳಿಸಲು ಸಾಧ್ಯವಿಲ್ಲ. ಆದರೆ ಪರೀಕ್ಷೆಯಿಂದಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ವಿಷಯದಲ್ಲಿ ಹಿನ್ನಡೆಯಾಗಿದೆಯೇ? ಅದನ್ನು ನಿವಾರಿಸಲು ಏನು ಮಾಡಬಹುದು ಎಂಬುದು ಅರಿವಾಗಿ ಆ ಕ್ರಮಗಳನ್ನು ಅನುಸರಿಸಬಹುದಾಗಿದೆ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಅತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡಬಹುದಾಗಿದೆ. ಹಾಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಹಾಗೂ 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸುತ್ತೋಲೆ ಇಲ್ಲಿದೆ – 5ಮತ್ತು 8ನೇ ತರಗತಿ ಪರೀಕ್ಷೆಗಳು
*ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮತ್ತೊಂದು ಬಿಸಿ; ತೆಲಂಗಾಣ ಮಾದರಿ ಪ್ರತಿಭಟನೆ ಎಚ್ಚರಿಕೆ*
https://pragati.taskdun.com/belagavichikkodisaparate-districtbelagavi-session/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ