Belagavi NewsBelgaum NewsKannada NewsKarnataka News

ಪ್ರಸ್ತುತ ಅವಧಿಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ನನ್ನ ಗುರಿ – ಲಕ್ಷ್ಮೀ ಹೆಬ್ಬಾಳಕರ್

​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಪ್ರಸ್ತುತ 2023 -2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Home add -Advt

ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ‌ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿಗಳನ್ನು‌​ ಸೋಮವಾರ ಉದ್ಘಾಟಿಸಿ​ ಅವರು ಮಾತನಾಡಿದರು.

​ಕಳೆದ ಅವಧಿಯಲ್ಲಿ ಸಾಕಷ್ಟು ಶಾಲಾ ಕೊಠಡಿ, ಸ್ಮಾರ್ಟ್ ಕ್ಲಾಸ್, ಆಟದ ಮೈದಾನ, ವಿಜ್ಞಾನ ಉಪಕರಣ, ಕ್ರೀಡಾ ಸಾಮಗ್ರಿ ಎಲ್ಲ ವ್ಯವಸ್ಥೆ ಮಾಡಿದ್ದೇನೆ. ಜೊತೆಗೆ ದೇವಸ್ಥಾನಗಳನ್ನು, ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದೇನೆ. ಈ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಿ, ಶೈಕ್ಷಣಿಕ ಕ್ರಾಂತಿ ಮಾಡುತ್ತೇನೆ ಎಂದು ಅವರು ಹೇಳಿದರು.

ತುಮ್ಮರಗುದ್ದಿ ಹಾಗೂ ಸೋಮನಟ್ಟಿಗೆ ತಲಾ ​ಇನ್ನೊಂದು ಕೊಠಡಿ, ಶಾಲೆಗೆ ಅಗತ್ಯವಾದ ಎಲ್ಲ ಡೆಸ್ಕ್ ಗಳನ್ನು ಒದಗಿಸುತ್ತೇನೆ. ತುಮ್ಮರಿಗುದ್ದಿಗೆ ವಿಜ್ಞಾನ ಉಪಕರಣ, ಸ್ಮಾರ್ಟ್ ಕ್ಲಾಸ್ ರೂಂ ಒದಗಿಸುತ್ತೇನೆ. ಸೋಮನಟ್ಟಿಯಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಯಲ್ಲಮ್ಮನ ಗುಡಿಯನ್ನು ನಿರ್ಮಾಣ ಮಾಡುತ್ತೇನೆ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ​ಚನ್ನರಾಜ ಹಟ್ಟಿಹೊಳಿ, ಆಯಾ ಗ್ರಾಮಗಳ ಹಿರಿಯರು,​ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಮುಖಂಡ​ ಮೃಣಾಲ ಹೆಬ್ಬಾಳಕರ್, ಆಯಾ ಶಾಲೆಗಳ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related Articles

Back to top button