Kannada NewsKarnataka NewsLatest

*ಶಕ್ತಿ ಚಂಡಮಾರುತದ ಎಫೆಕ್ಟ್: 9 ಜಿಲ್ಲೆಯಲ್ಲಿ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ಶಕ್ತಿ ಚಂಡಮಾರುತದ ಪರಿಣಾಮ ಅ.11ರವರೆಗೂ ಮಳೆ ಮುಂದುವರಿಯಲಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಮುಂದಿನ 3-4ದಿನ ವ್ಯಾಪಕ ಮಳೆ ಬೀಳಲಿದ್ದು 9 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ 

Home add -Advt

ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. 

ರಾಜಧಾನಿ ಬೆಂಗಳೂರಲ್ಲೂ ಮಳೆ ಸುರಿಯಲಿದೆ.ಅಕ್ಟೋಬರ್ 11ರ ವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Related Articles

Back to top button