Kannada NewsLatestNational

*ಮೋಂಥಾ ಚಂಡಮಾರುತದ ಎಫೆಕ್ಟ್: ಮೂರು ದಿನ ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶದ ಕರಾವಳಿಯಲ್ಲಿ ಸೋಮವಾರ ಸಂಜೆಯಿಂದಲೇ ತೀವ್ರಗೊಂಡಿರುವ ಮೋಂಥಾ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಈ ಚಂಡಮಾರುತದ ಪರಿಣಾಮ ಮಂಗಳವಾರ ಸಂಜೆಯ ವೇಳೆಗೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಮಚಲಿಪಟ್ಟಣ- ಕಾಕಿನಾಡ ಪಟ್ಟಣದ ನಡುವೆ ಹಾದು ಹೋಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾದಲ್ಲಿ ಶಾಲೆಗಳಿಗೆ ಮೂರು ದಿನ ರಜೆ ನೀಡಲಾಗಿದೆ. ರೈಲು ಮತ್ತು ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. 

ಒಡಿಶಾ ಕರಾವಳಿಯ ಎಂಟು ಜಿಲ್ಲೆಯ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ರಾಷ್ಟ್ರೀಯ, ರಾಜ್ಯ ವಿಪತ್ತು ನಿರ್ವಹಣಾ ತಂಡಗಳು, ಅಗ್ನಿಶಾಮಕ ದಳಗಳನ್ನು ಮುನ್ನೆಚ್ಚರಿಕೆಯಾಗಿ ನಿಯೋಜಿಸಲಾಗಿದೆ.

Home add -Advt

Related Articles

Back to top button