ಖಾನಾಪುರದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಪ್ರಯತ್ನ – ಡಾ.ಸೋನಾಲಿ ಸರ್ನೋಬತ್
ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಖಾನಾಪುರಕ್ಕೆ ಬೃಹತ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅಗತ್ಯವಿದ್ದು, ಈ ದಿಸೆಯಲ್ಲಿ ಪ್ರಯತ್ನಿಸುವುದಾಗಿ ನಿಯತಿ ಫೌಂಡೇಶನ್ ಚೇರಮನ್ ಹಾಗೂ ಬಿಜೆಪಿ ಬೆಳಗಾವಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಹೇಳಿದ್ದಾರೆ.
ಮಾಚಿಗಡದ ಕ್ರಿಕೆಟ್ ಮೈದಾನ ಹಾಗೂ ಸುಬ್ರಹ್ಮಣ್ಯ ಯುವಕ ಸಂಘ ಆಯೋಜಿಸಿದ್ದ ಹಾಫ್ ಪಿಚ್ ಕ್ರಿಕೆಟ್ ಟೂರ್ನಾಮೆಂಟ್ ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾ ಚಟುವಟಿಕೆಗಳಿಗೆ ಎಲ್ಲ ರೀತಿಯ ಪ್ರೋತ್ಸಾಹ, ಸಹಕಾರ ನೀಡಲಾಗುವುದು. ಖಾನಾಪುರ ತಾಲೂಕಿನಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ಅವರಿಗೆ ಕ್ರೀಡೆಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳಾಗಬೇಕಿದೆ. ಆ ದಿಸೆಯಲ್ಲಿ ಪ್ರಯತ್ನಿಸಲಾಗುವುದು ಎಂದು ಸೋನಾಲಿ ಸರ್ನೋಬತ್ ಭರವಸೆ ನೀಡಲಾಗುವುದು.
ಮಕರ ಸಂಕ್ರಾಂತಿ ನಿಮಿತ್ತ ಶನಿವಾರ ಕ್ರಿಕೆಟ್ ಟೂರ್ನಾಮೆಂಟ್ ಆಯೋಜಿಸಲಾಗಿತ್ತು. ವಿಜೇತರಿಗೆ ಮೊದಲ ಬಹುಮಾನವಾಗಿ 11,022 ರೂಗಳನ್ನು ಸೋನಾಲಿ ಸರ್ನೋಬತ್ ನೀಡಿದರು.
ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಜ್ಞಾನವನ್ನು ಗುರಿಯಾಗಿಟ್ಟುಕೊಂಡಾಗ ವ್ಯಕ್ತಿತ್ವ ಬೆಳವಣಿಗೆ ಮತ್ತು ರಾಷ್ಟ್ರದ ನಿರ್ಮಾಣ ಸಾಧ್ಯ: ಸ್ವಾಮಿ ಮೋಕ್ಷಾತ್ಮಾನಂದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ