Latest

ವಿಶ್ವಾಸಮತಯಾಚನೆಯಲ್ಲಿ ಗೆದ್ದು ಬೀಗಿದ ಏಕನಾಥ್ ಶಿಂಧೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಇಂದು ನಡೆದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲಾಗಿದ್ದು, ಏಕನಾಥ್ ಶಿಂಧೆ ಸರ್ಕಾರ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಂತಾಗಿದೆ.

ವಿಶ್ವಾಸಮತಯಾಚನೆ ವೇಳೆ ಏಕನಾಥ್ ಶಿಂಧೆ ಪರವಾಗಿ 164 ಮತಗಳು ಬಂದವು. ಹೀಗಾಗಿ ಅಗತ್ಯಕ್ಕಿಂತ ಹೆಚ್ಚು ಶಾಸಕರು ಬೆಂಬಲ ನೀಡಿದ್ದಾರೆ. ಇನ್ನು ಬಿಜೆಪಿಯ ರಾಹುಲ್ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button