
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಹ್ಯಾಕ್ ಪ್ರಕರಣ ಮತ್ತೆ ಹೆಚ್ಚುತ್ತಿದೆ. ಮಾಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರ ಎಕ್ಸ್ ಖಾತೆಯನ್ನು ಹ್ಯಾಕರ್ಸ್ ಗಳು ಹ್ಯಾಕ್ ಮಾಡಿದ್ದಾರೆ.
ಏಕನಾಥ್ ಶಿಂದೆ ಅವರ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿರುವ ಹ್ಯಾಕರ್ಸ್, ಖಾತೆಯಿಂದ ಪಾಕಿಸ್ತಾನ ಹಾಗೂ ಟರ್ಕಿ ಧ್ವಜಗಳನ್ನು ಪೋಸ್ಟ್ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸೈಬರ್ ಅಪರಾಧ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಹ್ಯಾಕ್ ಆದ ಬಳಿಕ ಸುಮಾರು 30-45 ನಿಮಿಷಗಳ ಒಳಗಾಗಿ ಖಾತೆಯನ್ನು ಮರುಸ್ಥಾಪಿಸಲಾಗಿದೆ. ಪೋಸ್ಟ್ ಗಳನ್ನು ಡಿಲಿಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.