ರಾಜ್ಯದಲ್ಲಿ ಒಂದೇ ದಿನದಲ್ಲಿ 38 ಹೊಸ ಕೊರೊನಾ ಪ್ರಕರಣ ಪತ್ತೆ

ಪ್ರತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದ ವರೆಗೆ 38 ಹೊಸ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದರಲ್ಲಿ ಮೈಸೂರು ಜಿಲ್ಲೆ ಒಂದರಲ್ಲೇ 12 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 353ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ದಿನ ದಿನಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈಗಾಗಲೇ 13 ಜನರು ಸಾವನ್ನಪ್ಪಿದ್ದಾರೆ. 353 ಸೋಂಕಿತರಲ್ಲಿ 82 ಜನರು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ ಹೊಸದಾಗಿ 38 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Home add -Advt

ಬೆಂಗಳೂರಿನಲ್ಲಿ 9, ಮೈಸೂರಿನಲ್ಲಿ 12, ಮಂಡ್ಯದಲ್ಲಿ 3, ಬಳ್ಳಾರಿಯಲ್ಲಿ 7, ಚಿಕ್ಕಬಳ್ಳಾಪುರದಲ್ಲಿ 3, ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ 1, ವಿಜಯಪುರದಲ್ಲಿ 2, ಬೀದರ್​ನಲ್ಲಿ 1 ಸೋಂಕಿತ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನ 7 ಜನರಲ್ಲಿ 6 ಜನರಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Related Articles

Back to top button