ಅಧ್ಯಕ್ಷರಾಗಿ ಖಾನಾಪುರಿ, ಉಪಾಧ್ಯಕ್ಷರಾಗಿ ಅಂಕಲಗಿ ಅವಿರೋಧ ಆಯ್ಕೆ
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಬುಧವಾರ ನಡೆದ ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಜಹರ್ ಖಾನಾಪುರಿ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಅಂಕಲಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಪಟ್ಟಣ ಪಂಚಾಯ್ತಿಯ ಎಲ್ಲ ಸದಸ್ಯರ ಸಭೆ ನಡೆಸಿ ಅಧ್ಯಕ್ಷ -ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಉಳಿದ ಸದಸ್ಯರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಖಾನಾಪುರಿ ಮತ್ತು ಅಂಕಲಗಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿದ ಬಳಿಕ ಚುನಾವಣಾಧಿಕಾರಿ ರೇಶ್ಮಾ ತಾಳಿಕೋಟಿ ಖಾನಾಪುರಿ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಅಂಕಲಗಿ ಅವರನ್ನು ಉಪಾಧ್ಯಕ್ಷರನ್ನಾಗಿ ಅಧಿಕೃತವಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ವಿವೇಕ ಬನ್ನೆ ಸೇರಿದಂತೆ ಪಟ್ಟಣ ಪಂಚಾಯ್ತಿ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ