Kannada NewsKarnataka NewsLatestPolitics
*ಮುಂಬರುವ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕ್ಯಾಬಿನೆಟ್ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ಸಚಿವ ಸಂಪುಟ ಸಭೆ ಅನುಮತಿ ನೀಡಿದೆ ಎಂದರು.
ಇವಿಎಂ ದೋಷದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ವಿವಿಎಂ ಬಗ್ಗೆ ಜನರು ವಿಶ್ವಾಸ ಕಳೆದುಕೊಳ್ಲುತ್ತಿದ್ದಾರೆ. ಹಾಗಾಗಿ ಮುಂಬರುವ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೂ ಶಿಫಾರಸು ಮಾಡಲಾಗುವುದು ಎಂದರು.