Belagavi NewsBelgaum NewsElection NewsKannada NewsKarnataka NewsPolitics
ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಮಾಡಿದ ಚುನಾವಾಣಾ ಆಯೋಗ
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಗುರುವಾರ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆ ವೇಳೆ ಭಾಷಣ ಮಾಡಿದ್ದ ಕಾಗವಾಡ ಶಾಸಕ ರಾಜು ಕಾಗೆ, ವಿವಾದಾತ್ಮಕ ಭಾಷಣ ಮಾಡಿದ್ದರು. “ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ್ ಕಟ್” ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, 24 ಗಂಟೆಯೊಳಗಾಗಿ ವಿವರಣೆ ನೀಡುವಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ