GIT add 2024-1
Beereshwara 33

ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಮಾಡಿದ ಚುನಾವಾಣಾ ಆಯೋಗ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರಿಗೆ ಚುನಾವಣಾಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

Emergency Service

ಗುರುವಾರ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆ ವೇಳೆ ಭಾಷಣ ಮಾಡಿದ್ದ ಕಾಗವಾಡ ಶಾಸಕ ರಾಜು ಕಾಗೆ, ವಿವಾದಾತ್ಮಕ ಭಾಷಣ ಮಾಡಿದ್ದರು. “ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ್ ಕಟ್” ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, 24 ಗಂಟೆಯೊಳಗಾಗಿ ವಿವರಣೆ ನೀಡುವಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.

Laxmi Tai add
Bottom Add3
Bottom Ad 2