Kannada NewsKarnataka NewsLatest

ಬೆಳಗಾವಿಯಲ್ಲಿ ಚುನಾವಣೆ ಆಯುಕ್ತರ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ ಆಗಮಿಸಿದ್ದು, ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

Home add -Advt

ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಯಾವುದೇ ಕ್ಷಣದಲ್ಲಿ ಉಪಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಇಲ್ಲಿ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಸಂಜೀವಕುಮಾರ ಆಗಮಿಸಿದ್ದಾರೆ. ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲ ಮಾಹಿತಿ ಕಲೆಹಾಕುತ್ತಿದ್ದಾರೆ. ಸಭೆ ಬಳಿಕ ಸಂಜೀವಕುಮಾರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಒಂದೆರಡು ದಿನದಲ್ಲಿ ದಿನಾಂಕ ಘೋಷಣೆಯಾಗಬಹುದು. ಚುನಾವಣೆ ಆಯೋಗ ಎಲ್ಲ ಸಿದ್ಧತೆಗಳನ್ನು ಚುರುಕುಗೊಳಿಸಿದೆ.

2 ದಿನದಲ್ಲಿ ಬೆಳಗಾವಿ ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ

ವಿಟಿಯುದಲ್ಲಿ ಬಾಳೆಕುಂದ್ರಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ

Related Articles

Back to top button