*ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣ, 16 ಲಕ್ಷ ಮೌಲ್ಯದ ಸೀರೆ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಹಣ, ಸೀರೆ, ಮದ್ಯ ಸೇರಿದಂತೆ ವಿವಿಧ ವಸ್ತುಗಳನ್ನು ಹಂಚಲಾಗುತ್ತಿದೆ. ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇವುಗಳ ಮೇಲೆ ನಿಗಾವಹಿಸಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ ರೇಷ್ಮೆ ಸೀರೆ, ಕಂತೆ ಕಂತೆ ಹಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಚಿಕ್ಕಬಳ್ಳಾಪುರ, ಧರವಾಡ ಜಿಲ್ಲೆಗಳಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ 1536 ರೇಷ್ಮೆ ಸೀರೆಗಳು ಪತ್ತೆಯಾಗಿದ್ದು, ಇವುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಸುಲ್ತಾನ್ ಪೇಟೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ