Kannada NewsKarnataka NewsLatest

ಗ್ರಾಮ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿ ಎಚ್ಚರಿಕೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.
ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ.
1) ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಎರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಭಾವುಟ,
ಬ್ಯಾನರ್‌ಗಳನ್ನು ಬಳಸುವಂತಿಲ್ಲ.
2) ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು
ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.
3) ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ/ಪಕ್ಷದ
ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ಹಂಚುವುದು ಮಾಡುವಂತಿಲ್ಲ.
4) ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು,
ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ
5) ‘ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ
ರಾಜಕೀಯ ಮುಖಂಡ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹಿರಾತು
ನೀಡುವಂತಿಲ್ಲ.
ಈ ಮೇಲೆ ತಿಳಿಸಿರುವಂತಹ ಪ್ರಕರಣಗಳು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ
ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣೆ ಪ್ರಚಾರ ಸಾಮಗ್ರಿಗಳನ್ನು
ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಅಂತಹವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ
ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ
 ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯವನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಭಾನುವಾರ(ಡಿ.13) ಖುದ್ದಾಗಿ ಪರಿಶೀಲಿಸಿದರು.
ನಗರದ ವಿಶ್ವೇರಯ್ಯ ನಗರ, ಆಜಂ‌ ನಗರ ಮತ್ತು ರಾಮ ನಗರ ಸೇರಿದಂತೆ ವಿವಿಧ ಕಡೆಯ ಸರ್ಕಾರಿ ಶಾಲೆಗಳ ಮತಗಟ್ಟೆ ಕೇಂದ್ರಗಳಲ್ಲಿ ನಡೆದಿರುವ ಪರಿಷ್ಕರಣೆ ಕಾರ್ಯವನ್ನು ವೀಕ್ಷಿಸಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿಯಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬರದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button