*ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ಚುನಾವಣಾ ಅಕ್ರಮವೆಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.
ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಅವರ ತಂದ ಭ್ರಷ್ಟಾಚರದ ಪಿತಾಮಹ. ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡಲು ಹೊರಟಿದ್ದಾರೆ. 40% ಕಮಿಷನ್ ಪಡೆದು ಹಣ ಸಂಗ್ರಹ ಮಾಡಿದ್ದಾರೆ. ಒಂದು ಮತಕ್ಕೆ 6 ಸಾವಿರ ರೂಪಾಯಿ ಕೊಡ್ತೀವಿ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಆಮಿಷದ ವಿಡಿಯೋ ಕೂಡ ಇದೆ. ದಾಖಲೆ ಸಮೇತ ಬಿಜೆಪಿ ನಾಯಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.
ಪ್ರತಿ ಮತದಾರನಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಸರಕಾರದ ಚುಕ್ಕಾಣಿ ಹಿಡಿದಿರುವ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಲಾಗಿದೆ. ಐಪಿಸಿ ಸೆಕ್ಷ 171(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು.ಪೊಲೀಸರು ಎಫ್ ಐ ಆರ್ ದಾಖಲಿಸಿ ಬಿಜೆಪಿ ನಾಯಕರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಕೆಲವೇ ಹೊತ್ತಿನಲ್ಲಿ ದೂರು
https://pragati.taskdun.com/comgress-is-going-to-lodge-a-complaint-against-ramesh-jarakiholi-and-three-others/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ