Kannada NewsKarnataka NewsLatest
*ಚುನಾವಣಾಧಿಕಾರಿಗಳ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು; ಬ್ಯಾಲೆಟ್ ಪೇಪರ್, ಲ್ಯಾಪ್ ಟಾಪ್ ದೋಚಿ ಎಸ್ಕೇಪ್*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಚುನಾವಣಾಧಿಕಾರಿಗಳ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಬ್ಯಾಲೆಟ್ ಪೇಪರ್ ಹಾಗೂ ಲ್ಯಾಪ್ ಟಾಪ್ ಗಳನ್ನು ದೋಚಿ ಪರಾರಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯ ಬಿಳಿ ನಡೆದಿದೆ.
ಹುಳ್ಳೇನಹಳ್ಳಿ ಹಾಲು ಉತ್ಪಾದಕ ನಿರ್ದೇಶಕ ಸ್ಥಾನಕ್ಕೆ ಚುನವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮಗಡಿ ರಸ್ತೆಯಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಚುನಾವಣಾಧಿಕಾರಿಗಳಾದ ಉಮೇಶ್ ಹಾಗೂ ಉಷಾ ಅವರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ, ಲ್ಯಾಪ್ ಟಾಪ್ ಹಾಗೂ ಬ್ಯಾಲೆಟ್ ಪೇಪರ್ ಗಳನ್ನು ಕಸಿದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಗದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ