ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೊರೋನಾ ಹಾವಳಿ ಚುನಾವಣೆಗಳ ಮೇಲೂ ಪರಿಣಾಮ ಬೀರುತ್ತಿದೆ. ರಾಜ್ಯದಲ್ಲಿ ಈ ತಿಂಗಳ ಅಂತ್ಯದೊಳಗೆ ನಡೆಯಬೇಕಿದ್ದ 4 ಚುನಾವಣೆಗಳನ್ನು ಚುನಾವಣೆ ಆಯೋಗ ಮುಂದೂಡಿದೆ.
ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರದ 2 ಮತ್ತು ಪದವೀದರ ಕ್ಷೇತ್ರದ 2 ಸ್ಥಾನಗಳ ಅವಧಿ ಜೂನ್ 30ಕ್ಕೆ ಅಂತ್ಯಗೊಳ್ಳಲಿದೆ. ನಿಯಮಾವಳಿ ಪ್ರಕಾರ ಅಷ್ಟರೊಳಗೆ ಚುನಾವಣೆ ನಡೆದು ಪ್ರತಿನಿಧಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು.
ಆದರೆ ಕೊರೋನಾ ಅತ್ಯಂತ ವೇಗವಾಗಿ ಹರಡುತ್ತಿರುವುದರಿಂದ ಚುನಾವಣೆ ಸಿದ್ಧತೆ ಮಾಡಬೇಕಾದ ಸಿಬ್ಬಂದಿ ಬ್ಯುಸಿ ಆಗಿದ್ದಾರೆ. ಜೊತೆಗೆ ರಾಜಕೀಯ ಪಕ್ಷಗಳೂ ಸಧ್ಯಕ್ಕೆ ಚುನಾವಣೆಗೆ ತಯಾರಾಗುವ ಸ್ಥಿತಿಯಲ್ಲಿಲ್ಲ ಎಂದು ತಿಳಿಸಿವೆ. ಹಾಗಾಗಿ ಈ ನಾಲ್ಕೂ ಸ್ಥಾನಗಳ ಚುನಾವಣೆಯನ್ನು ಮುಂದೂಡಿ ಚುನಾವಣೆ ಆಯೋಗ ಆದೇಶ ಹೊರಡಿಸಿದೆ. ಹೊಸ ದಿನಾಂಕ ಇನ್ನಷ್ಟೆ ಪ್ರಕಟವಾಗಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ