
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ವಿವಿಧ 4 ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಯ ಚುನಾವಣೆ ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಜರುಗಲಿದೆ.
ಜುಲೈ 7 ರಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರ ಸ್ವೀಕೃತಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಳಗಾವಿ ಮಹಾನಗರ ಪಾಲಿಕೆ (ಚುನಾವಣೆ) ಅಧ್ಯಕ್ಷಾಧಿಕಾರಿಗಳಾದ ಎಸ್.ಬಿ. ಶೆಟ್ಟೆಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




