Kannada NewsLatest

ಯಾರೂ ಸಂಭ್ರಮಾಚರಣೆ ಮಾಡಬೇಡಿ; ಕಾರ್ಯಕರ್ತರಿಗೆ ಡಿಕೆಶಿ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಾರೂ ಕೂಡ ಸಂಭ್ರಮಾಚಣೆಗಳನ್ನು ಮಾಡಿ ಕೋವಿಡ್ ನಿಯಮ ಉಲ್ಲಂಘಿಸಬೇಡಿ ಎಂದು ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಗೆಲುವು ಪಡೆದಿರುವುದು ಸಂತಸ ತಂದಿದೆ. ಬೆಳಗಾವಿಯಲ್ಲಿ ಕೂಡ ನಾವು ಮುನ್ನಡೆ ಸಾಧಿಸಿದ್ದು ಇನ್ನೇನು ಫಲಿತಾಂಶ ಹೊರಬರಲಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗೆ ಸಲ್ಪ ಹಿನ್ನಡೆಯಾಗಿದೆ. ಫಲಿತಾಂಶ ಏನೇ ಬರಲಿ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಜನ ಬದಲಾವಣೆ ಬಯಸಿದ್ದಾರೆ ಎಂದರು.

ಮಸ್ಕಿ, ಬೆಳಗಾವಿ ಎಲ್ಲಿಯೇ ಆಗಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಹಿನ್ನೆಲೆಯಲ್ಲಿ ಯಾರೂ ಸಂಭ್ರಮಾಚರಣೆ ಮಾಡುವುದು ಬೇಡ. ಕೋವಿಡ್ ನಿಯಮ ಜಾರಿಯಲ್ಲಿರುವುದರಿಂದ ಸಂಭ್ರಮಾಚರಣೆ ಮಾಡದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದೆ. ಹಾಗಾಗಿ ನಿಯಮ ಉಲ್ಲಂಘನೆಯಾದರೆ ಕೇಸ್ ದಾಖಲಾಗುತ್ತದೆ. ಈ ನಿಟ್ಟಿನಲ್ಲಿ ಯಾರೂ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಬಾರದು ಎಂದು ಹೇಳಿದರು.
ಮದುವೆಯಾದ ಮೊದಲ ದಿನವೇ ಕೊರೊನಾಗೆ ಬಲಿಯಾದ ವರ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button