ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹೊಣೆಯನ್ನು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಗಲಿಗೆ ಹಾಕಿದೆ.
ಶನಿವಾರ ಬೆಳಗಾವಿಯಲ್ಲಿ ಚುನಾವಣೆ ಸಂಬಂಧ ರಚಿಸಲಾಗಿರುವ ಸಮಿತಿಯ ಸಭೆ ನಡೆಯಿತು. ಮಾಜಿ ಸಚಿವ ಎಂ.ಬಿ.ಪಾಟೀಲ ನೇತೃತ್ವದ ಈ ಸಮಿತಿ ಸಭೆಯಲ್ಲಿ ಹಲವಾರು ವಿಷಯಗಳು ಚರ್ಚೆಯಾಗಿ, ಯಾರು ಸ್ಪರ್ಧಿಸಬಕೆನ್ನುವ ಕುರಿತು ಮುಂದಿನ ವಾರ ಮತ್ತೆ ಸಭೆ ಸೇರಿ ನಿರ್ಣಯಿಸಲು ನಿರ್ಧರಿಸಲಾಯಿತು.
ಅಭ್ಯರ್ಥಿಯ ಆಯ್ಕೆ ಕುರಿತು ಚರ್ಚೆ ಆಗಿದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ವಾರದಲ್ಲಿ ಮತ್ತೊಮ್ಮೆ ಸಭೆ ಸೇರಿ ಈ ಕುರಿತು ನಿರ್ಧರಿಸುತ್ತೇವೆ ಎಂದು ಎಂ.ಬಿ.ಪಾಟೀಲ ತಿಳಿಸಿದರು.
ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಈ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದೂ ಅವರು ಹೇಳಿದರು.
ಆಕಾಂಕ್ಷಿಗಳು ಹಲವರಿದ್ದಾರೆ. ಎಲ್ಲ ಜಾತಿ, ಎಲ್ಲ ವಯೋಮಾನದವರಿದ್ದಾರೆ. ಎಲ್ಲ ಆಯಾಮಗಳಿಂದ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಸತೀಶ್ ಜಾರಕಿಹೊಳಿ, ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಮೊದಲಾದವರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ