
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯುಕ್ತರಾಗಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ.
ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಆಯ್ಕೆಮಾಡಲಾಗಿದೆ.
1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್ ಕುಮಾರ್ ಆಗಿದ್ದಾರೆ.
ಚುನಾವಣಾ ಆಯೋಗದ ಮುಖ್ಯಸ್ಥರ ಆಯ್ಕೆ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ಬದಲಿಗೆ ಗೃಹ ಸಚಿವರನ್ನು ನೇಮಿಸಿತು. ನಿನ್ನೆ ಬೆಳಗ್ಗೆ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಅವರ ಹೆಸರನ್ನು ಅಂತಿಮಗೊಳಿಸಿ ರಾಷ್ಟ್ರಪತಿಗೆ ಶಿಫಾರಸು ಮಾಡಿತ್ತು. ಅಂತಿಮವಾಗಿ ಜ್ಞಾನೇಶ್ ಆಯ್ಕೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ