Karnataka News

*ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಬೆಂಕಿ ಪ್ರಕರಣಗಳು ಹೆಚ್ಚುತ್ತಿವೆ. ಎಲೆಕ್ಟ್ರಿಕ್ ಸ್ಕೂಟರ್ ವೊಂದು ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

ಬೆಂಗಳೂರಿನ ಆರ್.ಆರ್.ನಗರ ಬೆಮಲ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಶಿವಾನಂದ ಎಂಬುವವರು ಎಂದಿನಂತೆ ಸ್ಕೂಟರ್ ನಲ್ಲಿ ಆರ್.ಆರ್.ನಗರದ ಕಚೇರಿಗೆ ಬಂದಿದ್ದರು. ಈ ವೇಳೆ ಬಳಿಕ ನಾಗರಬಾವಿಗೆ ತೆರಳಲು ಸ್ಕೂಟರ್ ತೆಗೆದುಕೊಂಡು ಹೊರ ಬರುತ್ತಿದ್ದಂತೆ ಸ್ಕೂಟರ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಇಳಿದಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಸ್ಕೂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಹೊತ್ತಿ ಉರಿದಿದೆ. ಕಣ್ಮುಂದೆಯೇ ಬೈಕ್ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button