Karnataka News

*ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಬೆಂಕಿ ಅವಘಡ: ಯುವತಿ ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಯುವತಿಯೊಬ್ಬರು ಸಜೀವದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ರಾಜ್ ಕುಮರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಯಲ್ಲಿ ಶೋ ರೂಂ ಹೊತ್ತಿ ಉರಿದಿದೆ. ಈ ವೇಳೆ ಶೋರೂಂ ಒಳಗೆ ಸಿಲುಕಿದ್ದ ಯುವತಿ ಹೊರಬರಲಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಸೇಲ್ಸ್ ಗರ್ಲ್ ಆಗಿದ್ದ ಪ್ರಿಯಾ ಮೃತ ಯುವತಿ. ಶೂರೂಂ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, 25 ಬೈಕ್ ಗಳು ಸುಟ್ಟು ಕರಕಲಾಗಿವೆ. ಶೋ ರೂಂ ಒಳಗೆ ಸಿಲುಕಿದ್ದ ಯುವತಿ ಕೂಡ ಸಜೀವದಹನವಾಗಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Related Articles

Back to top button