Kannada NewsKarnataka NewsLatest

*ಬೆಸ್ಕಾಂ ನಿರ್ಲಕ್ಷಕ್ಕೆ ತಾಯಿ-ಮಗಳು ಬಲಿ; ವಿದ್ಯುತ್ ತಂತಿ ತುಳಿದು ಧಾರುಣ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಸ್ತೆ ಮೇಲೆ ಹೋಗುತ್ತಿದ್ದಾಗ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಮೃತರು.

ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ತಾಯಿ ಹಾಗೂ ಮಗಳು ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಇಳಿದು ಮನೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ ಕರೆಂಟ್ ವೈರ್ ಕಾಣದೇ ತಿಳಿದಿದ್ದಾರೆ. ಕ್ಷಣಾರ್ಧದಲ್ಲಿ ವಿದ್ಯುತ್ ಪ್ರವಹಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದುರಂತಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button