Latest

ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ.ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಮಾಡಲಾಯಿತು.

ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು ಎಸ್ಕಾಂಗಳೊಂದಿಗೆ ಸಮನ್ವಯ ವಹಿಸಲಿವೆ.

ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ. ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು.

ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋವಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಕರ್ನಾಟಕದ 9, ಬೆಳಗಾವಿ ಒಬ್ಬರಿಗೆ ಸ್ಥಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button