ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮುಂದಾಗಿದ್ದು, ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಅನಿವಾರ್ಯ. ಹೀಗಾಗಿ ರೀ ಚಾರ್ಜಿಂಗ್ ಸೆಂಟರ್ ಸ್ಥಾಪಿಸಲು ಹೆಚ್ಚು ಆದ್ಯತೆ ನಿಡಲಾಗುವುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಬೆಂಗಳೂರಿನಲ್ಲಿ 136 ಕಡೆ ವಿದ್ಯುತ್ ರೀ ಚಾರ್ಜಿಂಗ್ ಸೆಂಟರ್ ಆರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ 500ಕ್ಕೂ ಹೆಚ್ಚು ಸೆಂಟರ್ ನಿರ್ಮಾಣವಾಗಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ