
ಪ್ರಗತಿವಾಹಿನಿ ಸುದ್ದಿ: ಜಮೀನಿಗೆ ಹೋಗಿದ್ದಾಗ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಜಮೀನು ಕೆಲಸಕ್ಕೆ ಹೋಗಿದ್ದ ಅನೀಲ್ ಕುಮಾರ್ (29) ಹಾಗೂ ಪುಟ್ಟರಾಜು (5) ಮೃತ ದುರ್ದೈವಿಗಳು.
ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಗಮನಿಸದೇ ತುಳಿದು ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ