Kannada NewsKarnataka NewsLatest

*BREAKING: ವಸತಿ ಶಾಲೆಯಲ್ಲಿ ಕರೆಂಟ್ ಶಾಕ್: 2ನೇ ತರಗತಿ ವಿದ್ಯಾರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ: ವಸತಿ ಶಾಲೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಕರೆಂಟ್ ಶಾಕ್ ಹೊಡೆದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಕೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. ಪುಷ್ಪಕ್ ಮೃತ ವಿದ್ಯಾರ್ಥಿ. ಎರಡನೇ ತರಗತಿ ಓದುತ್ತಿದ್ದ ಬಾಲಕ ಕರೆಂಟ್ ಶಾಕ್ ಗೆ ಬಲಿಯಾಗಿದ್ದಾನೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button