Kannada NewsKarnataka NewsLatest

*ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನತೆಗೆ ವಿದ್ಯುತ್ ದರದಲ್ಲಿ ಏರಿಕೆ ಮಾಡುವ ಮೂಲಕ ಸರ್ಕಾರ ಶಾಕ್ ನೀಡಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್ ಮೇಲೆ 56 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ನೂತನ ದರಗಳು ಇದೇ ಮೇ ತಿಂಗಳಿನಿಂದಲೇ ಜಾರಿಗೆ ಬರಲಿವೆ.

ಕಳೆದ 2024-25ರ ಆರ್ಥಿಕ ವರ್ಷದಲ್ಲಿ ಕೆಇಆರ್‌ಸಿ ಸುಮಾರು 34,084 ಕೋಟಿ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿತ್ತು. ಆದರೆ ವಾಸ್ತವದಲ್ಲಿ ಸಂಗ್ರಹವಾದ ಆದಾಯವು ಕೇವಲ 32,019 ಕೋಟಿ ರೂಪಾಯಿಗಳಷ್ಟಾಗಿದೆ. ಈ ಮೂಲಕ ಉಂಟಾಗಿರುವ ಅಂದಾಜು 2,068 ಕೋಟಿ ರೂಪಾಯಿಗಳ ಬೃಹತ್ ಆದಾಯದ ಕೊರತೆಯನ್ನು ಸರಿದೂಗಿಸಲು ಗ್ರಾಹಕರಿಗೆ ಈ ಹೊರೆ ಹೊರಿಸಲಾಗಿದೆ. 

ಎಸ್ಕಾಂ ಸಂಸ್ಥೆಗಳು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ಆಯೋಗವು, ಈ ದರ ಏರಿಕೆಗೆ ಹಸಿರು ನಿಶಾನೆ ತೋರಿಸಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರಿಗೆ, ಈಗ ವಿದ್ಯುತ್ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. 

ಮುಂದಿನ ತಿಂಗಳಿನಿಂದ ಮನೆಬಳಕೆ ಗ್ರಾಹಕರ ವಿದ್ಯುತ್ ಬಿಲ್ ಮೊತ್ತದಲ್ಲಿ ಗಣನೀಯ ಏರಿಕೆ ಕಂಡುಬರುವುದು ಖಚಿತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button