ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಜೀವ ದಹನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಈ ಕುರಿತು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದು, ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಣಂತಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇರನ್ನು ಅಮಾನತುಗೊಳಿಸಲಾಗಿದೆ. ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.
ಇಂದು ಮುಂಜಾನೆ ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಬಳಿ ಫುಟ್ ಪಾತ್ ಮೇಲೆ ತಾಯಿ ಹಾಗೂ ಮಗು ತೆರಳುತ್ತಿದ್ದಾ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಜೀವ ದಹನಗೊಂಡಿದ್ದರು. ಘಟನೆಯಲ್ಲಿ ಮಹಿಳೆ ಸೌಂದರ್ಯ ಹಾಗೂ ಮಗು ಲೀಲಾ ಮೃತಪಟ್ಟಿದ್ದರೆ, ಸೌಂದರ್ಯ ಪತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ದುರಂತದ ಬೆನ್ನಲ್ಲೇ ಕಾಡುಗೋಡಿ ಪೊಲೀಸರು ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದರು. ಅಲ್ಲದೇ ಬೆಸ್ಕಾಂ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯರು ಹಾಗೂ ಕುಟುಂಬ ಸದಸ್ಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ