ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿಯ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತರು. ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ರಮೇಶ್ ಜಾರಕಿಹೊಳಿ-ಅಮಿತ್ ಶಾ ಭೇಟಿ ವಿಚಾರ; ಸಚಿವ ಮುರುಗೇಶ್ ನಿರಾಣಿ ಹೇಳಿದ್ದೇನು?*
https://pragati.taskdun.com/ramresh-jarakiholiamit-shahmeetmurugesh-nirani-reaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ