ಪ್ರಗತಿವಾಹಿನಿ ಸುದ್ದಿ: ಚುನಾವಣಾ ಬಾಂಡ್ ಸಿಂಧುತ್ವದ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅಗತ್ಯವಿದೆ. ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ.
ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕಿನ ಉಲ್ಲಂಘನೆ. ಇದನ್ನು ನ್ಯಾಯಾಲಯ ನಿಷೇಧಿಸಿದ್ದು, ರಾಜಕೀಯ ಪಕ್ಷಗಳು ಈ ಮೂಲಕ ಪಡೆಯುತ್ತಿರುವ ಹಣಗಳ ಬಗ್ಗೆ ಮಾಹಿತಿ ಅಗತ್ಯವಾಗಿದೆ. ಎಷ್ಟು ಹಣ ದೇಣಿಗೆಯಾಗಿ ಬಂದಿದೆ ಎಂಬ ಬಗ್ಗೆ ಮಾಹಿತಿ ನೀಡುವತೆ ಸೂಚಿಸಿದೆ.
ಚುನಾವಣಾ ಬಾಂಡ್ ಅಸಂವಿಧಾನಿಕವಾಗಿದ್ದರೆ ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರ ನ್ಯಾಯಾಲಯವನ್ನು ಕೇಳಿದೆ.
2018ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ ಯೋಜನೆ ಜಾರಿಗೆ ತಂದಿತ್ತು.
ಚುನಾವಣಾ ಬಾಂಡ್ ಬಿಜೆಪಿಗೆ ಕಮಿಷನ್ ಪಡೆಯುವ ಮಾರ್ಗವಾಗಿತ್ತು ಎಂದು ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ