Kannada NewsKarnataka NewsLatest

*ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಆನೆ ದಾಳಿ; ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ; ಹಾಸನ: ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಲು ಮುಂದಾಗಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆಯೇ ಆನೆ ದಾಳಿ ನಡೆಸಿದ್ದು, ಸಿಬ್ಬಂದಿ ಬಲಿಯಾಗಿರುವ ಘಟನೆ ನಡೆದಿದೆ.

ವೆಂಕಟೇಶ್ ಮೃತ ಅರಣ್ಯ ಇಲಾಖೆ ಸಿಬ್ಬಂದಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರಿನಲ್ಲಿ ಈ ದುರಂತ ಸಂಭವಿಸಿದೆ.

ಗಾಯಗೊಂಡಿದ್ದ ಕಾಡಾನೆ ಭೀಮನಿಗೆ ಚಿಕಿತ್ಸೆ ನೀಡಲೆಂದು ಅರಣ್ಯ ಇಲಖೆ ಸಿಬ್ಬಂದಿ ಕಾಡಾನೆ ಹಿಡಿಯಲು ಯತ್ನಿಸಿದ್ದು, ಈ ವೇಳೆ ಸಿಬ್ಬಂದಿ ವೆಂಕಟೇಶ್ ಆನೆಗೆ ಅರವಳಿಕೆ ಮದ್ದು ನೀಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಆನೆ ಏಕಾಏಕಿ ಅವರ ಮೇಲೆಯೇ ದಾಳಿ ನಡೆಸಿದೆ.

ಆನೆ ದಾಳಿಯಿಂದ ಗಂಭೀರ ಸ್ಥಿತಿ ತಲುಪಿದ್ದ ವೆಂಕಟೇಶ್ ಅವರನ್ನು ತಕ್ಷಣ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button