
ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿದೆ ಘಟನೆ ರಾಮನಗರದಲ್ಲಿ ನಡೆದಿದೆ.
ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ಘಟನೆ ನಡೆದಿದೆ. ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.
ಎಲ್ಲರೂ ಆಟವಾಡುವ ಮೂಡ್ ನಲ್ಲಿದ್ದರು. ಖುಷಿಯಾಗಿ ಕಾಲ ಕಳೆಯುತ್ತಿದ್ದರು. ಇದೇ ವೇಳೆ ಕಾಡಾನೆ ಎಂಟ್ರಿಕೊಟ್ಟಿದ್ದು ಪ್ರವಾಸಿಗರು ಸ್ಥಳದಿಂದ ಕ್ಷಣಮಾತ್ರದಲ್ಲಿ ಕಾಲ್ಕಿತ್ತಿದ್ದಾರೆ. ಕಾಡಾನೆ ದಾಳಿಯಲ್ಲಿ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂಟಿಸಲಗ ಪ್ರವಾಸಿಗರ ಮೇಲೆ ದಾಳಿ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




