Latest

*ಕಾಡಾನೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಯೇ ಬಲಿ; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮೇಟಿಕುಪ್ಪ ಅರಣ್ಯದಲ್ಲಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸೊಳ್ಳಾಪುರ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಅರಣ್ಯ ಸಿಬ್ಬಂದಿ ಮೇಲೆ ತಡರಾತ್ರಿ ಕಾಡಾನೆ ದಾಳಿ ನಡೆಸಿದೆ. ಕಳೆದ 10 ವರ್ಷಗಳಿಂದ ಹಂಗಾಮಿ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಾಚರ್ ಮಹದೇವಸ್ವಾಮಿ (36) ಮೃತಪಟ್ಟಿದ್ದಾರೆ. ಮತ್ತೋರ್ವ ವಾಚರ್ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*ಮಹದಾಯಿ ವಿಚಾರ; ಈಗ ಲೋಪದೋಷ ಹುಡುಕುವುದು ಕಾಂಗ್ರೆಸ್ ಮನಸ್ಥಿತಿಯನ್ನು ತೋರುತ್ತದೆ; ಸಿಎಂ ಕಿಡಿ*

https://pragati.taskdun.com/mahadaicm-basavaraj-bommaireactionhubli/

Related Articles

Back to top button