Kannada NewsKarnataka NewsLatest

*ಆನೆ-ಮಾನವ ಸಂಘರ್ಷಕ್ಕೆ ಆನೆಧಾಮವೇ ಪರಿಹಾರ*: *ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕಾಡಂಚಿನ ಗ್ರಾಮಗಳಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಹೊಸ ಪರಿಹಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಆನೆಗಳಿಂದ ರೈತರು ಹಾಗೂ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗೆ ಆನೆಧಾಮದ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಯೋಜನೆ ಹೊಸದಲ್ಲ, ಈ ಹಿಂದೆಯೇ ರೂಪಿಸಲಾಗಿತ್ತು ಎಂಬ ವಿಚಾರವನ್ನೂ ಅವರು ಬಹಿರಂಗಪಡಿಸಿದ್ದಾರೆ. ಆದರೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗದ ಕಾರಣ ಯೋಜನೆ ಮುಂದುವರಿಯಲು ಸಾಧ್ಯವಾಗಿರಲಿಲ್ಲ.

ವಿಕಾಸಸೌಧದಲ್ಲಿ ಶಾಸಕರ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ತಾವು ಈ ಹಿಂದೆ ಅರಣ್ಯ ಸಚಿವರಾಗಿದ್ದಾಗ ಆನೆಧಾಮ ಸ್ಥಾಪನೆಯ ಯೋಜನೆ ರೂಪಿಸಿದ್ದಾಗಿ ತಿಳಿಸಿದರು. ಆದರೆ ಹುಲಿ ಸಂರಕ್ಷಿತ ಧಾಮದಲ್ಲಿ ಇಂತಹ ಯೋಜನೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸಿತ್ತು ಎಂದರು.

ತೋಟಗಳಲ್ಲೇ ಹುಟ್ಟಿ, ತೋಟಗಳಲ್ಲೇ ಬೆಳೆಯುವ ಆನೆಗಳಿಂದ ಸಮಸ್ಯೆ ಹೆಚ್ಚಾಗುತ್ತಿದೆ. ಇಂತಹ ಆನೆಗಳನ್ನು ಆನೆಧಾಮದಲ್ಲಿ ಇರಿಸಿದರೆ ಆನೆ-ಮಾನವ ಸಂಘರ್ಷವನ್ನು ನಿಯಂತ್ರಿಸಲು ಸಾಧ್ಯವಾಗಬಹುದು ಎಂದು ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟರು.

ಇದೇ ವೇಳೆ ಸಚಿವ ರಾಮಲಿಂಗಾರೆಡ್ಡಿ ಅವರ ಬಗ್ಗೆಯೂ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಹಿರಿಯ ಹಾಗೂ ಅನುಭವಿ ಸಚಿವರಾಗಿದ್ದಾರೆ. ಮುಖ್ಯಮಂತ್ರಿ ಅವರು ಬರಲಿದ್ದು, ಈಗಾಗಲೇ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಈ ಸಮಸ್ಯೆಗೆ ಅವರು ಪರಿಹಾರ ಒದಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Related Articles

Back to top button