
ಪ್ರಗತಿವಾಹಿನಿ ಸುದ್ದಿ: ಹಾಸನದಿಂದ ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೇ ವಿಚಾರವಾಗಿ ಇದೀಗ ಶಾಸಕಿ ನಯನಾ ಮೋಟಮ್ಮ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಹಾಸನದಿಂದ ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸಿರುವುದನ್ನು ವಿರೋಧಿಸಿ ಚಿಕ್ಕಮಗಳೂರಿನ ಕಾಡಂಚಿನ ಜನರು ಹೋರಾಟ ನಡೆಸಿದ್ದಾರೆ. ಇನ್ನೊಂದೆಡೆ ಜನರಿಗೆ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು ಬೆಂಬಲ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಜಿಲ್ಲೆಗೆ ಆನೆಗಳ ಸ್ಥಳಾಂತರ ಮಾಡಲು ನಾವು ಬಿಡುವುದಿಲ್ಲ. ಈಗಾಗಲೇ ಸ್ಥಳಾಂತರಿಸಿರುವ ಆನೇಗಳನ್ನು ವಾಪಸ್ ಕರೆದೊಯ್ಯುವಂತೆ ಶಾಸಕರು ಒತ್ತಾಯಿಸಿದ್ದಾಅರೆ.
ಆನೆಗಳ ಸ್ಥಳಾಂತರ ಹಾಗೂ ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಸಲೇಬೆಕಂದು ಮೂಡಿಗೇರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದಾರೆ. ಈ ಸಂಬಂಧ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಿಸಿಕೊಂಡು ಹೋಗಬೇಕು ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿಯೇ ಹೇಳಿದ್ದರು. ಅದರಂತೆ ಇಂದು ನಯನಾ ಮೋಟಮ್ಮ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸೌಧದ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ.
ನಯನಾ ಮೋಟಮ್ಮ ಆಗಮಿಸಿದ ವೇಳೆ ಸ್ಪೀಕರ್ ಇಲ್ಲದಿದ್ದರಿಂದ ಅವರ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಚಿ ಅವರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.
ಆದರೆ ನಾನು ರಾಜೀನಾಮೆ ಪತ್ರ ಸ್ವೀಕರಿಸಲು ಅವಕಾಶವಿಲ್ಲ ಎಂದು ಸ್ಪೀಕರ್ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಹೇಳಿದ್ದಾರೆ. ಅಲ್ಲದೇ ರಾಜೀನಾಮೆ ನೀಡಲು ಬಂದಿರುವ ವಿಚಾರವನ್ನು ಸ್ಪೀಕರ್ ಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಯನಾ ಮೋಟಮ್ಮ ರಾಜೀನಾಮೆ ವಿಚಾರ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.



