Wanted Tailor2
Cancer Hospital 2
Bottom Add. 3

*ಆನೆಗಳ ಸ್ಥಳಾಂತರಕ್ಕೆ ಶೀಘ್ರ ಕ್ರಮ*

ಸಿಎಂ ಸಿದ್ದರಾಮಯ್ಯ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಮೂಡಿಗೆರೆ: ಮೂಡಿಗೆರೆಯಲ್ಲಿ ಸುಮಾರು ಆನೆಗಳು ಕಾಡಿನಿಂದ ಬಂದಿವೆ. ಆನೆಗಳನ್ನು ಇಲ್ಲಿಂದ ಸ್ಥಳಾಂತರ ಮರಳಿ ಕಾಡಿಗೆ ಕಳುಹಿಸಲು ಶೀಘ್ರ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೂಡಿಗೆರೆಯಲ್ಲಿ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮೂಡಿಗೆರೆಯಲ್ಲಿ ಆನೆ ತುಳಿತಕ್ಕೆ ಒಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಅರಣ್ಯಾಧಿಕಾರಿಗಳ ಸಭೆ ನಡೆಸಿದ್ದು. ಪ್ರತಿಭಟನೆ ಮಾಡುತ್ತಿದ್ದ ದೊಡ್ಡಯ್ಯ ಅವರೊಂದಿಗೆ ಮಾತನಾಡಿದ್ದೇನೆ. ಅರಣ್ಯ ಸಚಿವರು ಕೂಡ ಇಲ್ಲಿಗೆ ಭೇಟಿ ನೀಡಲಿದ್ದಾರೆ ಎಂದರು.

ಅರಣ್ಯ ಇಲಾಖೆ ಸಚಿವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ನಯನಾ ಮೋಟಮ್ಮ ಸೇರಿದಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿದ್ದು, ಆನೆಗಳನ್ನು ಸ್ಥಳಾಂತರ ಮಾಡಲಾಗುವುದು ಎಂದರು.

ಬಿಜೆಪಿ ಪ್ರಯತ್ನ ವಿಫಲವಾಗಲಿದೆ:
ಆಪರೇಷನ್ ಕಮಲದ ಏಜೆಂಟರು ಕಾಂಗ್ರೆಸ್ ಶಾಸಕರ ಸಂಪರ್ಕದಲ್ಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಯಾರೇ ಸಂಪರ್ಕ ಮಾಡಿದರೂ ಕೂಡ ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ. ಬಿಜೆಪಿ ಪ್ರಯತ್ನ ವಿಫಲವಾಗಲಿದೆ ಎಂದರು.

Bottom Add3
Bottom Ad 2

You cannot copy content of this page