Karnataka NewsLatestNational
*ರೈಲು ನಿಲ್ದಾಣದಲ್ಲಿ ಘೋರ ದುರಂತ: ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚರ್ಲಪಲ್ಲಿ-ಷಾಲಿಮಾರ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸ್ಆವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಏಲೂರು ಬಳಿ ನಡೆದಿದೆ.
ಇಲ್ಲಿನ ಉಂಗುಟೂರು ಮಂಡಲದ ಚೇಬ್ರೋಲು ರೈಲು ನಿಲ್ದಾಣದಲ್ಲಿ ಈ ದುರಂತ ನಡೆದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು, ಓರ್ವ ಯುವಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದಾಗಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ನಿಲ್ದಾಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




