Kannada NewsKarnataka NewsLatest

ದೇಶಕ್ಕಾಗಿ ಮಡಿದ ವೀರರ ಜೀವನಾದರ್ಶಗಳನ್ನು ಅಳವಡಿಸಿಕೊಳ್ಳಿ – ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿಯಕ್ಸಂಬಾದ  ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಶ್ರೀ ಬೀರೇಶ್ವರ ಕೋ-ಆಫ್ ಕ್ರೇಡಿಟ್ ಸೊಸೈಟಿ ಲಿ., (ಮಲ್ಟಿ-ಸ್ಟೇಟ್) ನಲ್ಲಿ ೭೫ ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವನ್ನು ಆಚರಿಸಲಾಯಿತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಕಸಭಾ ಸದಸ್ಯರಾದ ಅಣ್ಣಾಸಾಹೇಬ ಜೊಲ್ಲೆ ಅವರು ವಹಿಸಿ ಧ್ವಜಾರೋಹಣ ನೆರವೇರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.    ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಅತಿಥಿಯಾಗಿದ್ದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ದೇಶದ ಏಕತೆ ಅಖಂಡತೆ ಕಾಪಾಡುವುದರ ಮೂಲಕ ಸ್ವಾತ್ರಂತ್ಯ ದಿನಾಚರಣೆಯನ್ನು ಆಚರಿಸೋಣ ಎಂದರು.

ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಅವರ ಆದರ್ಶಗಳು ನಮ್ಮೆಲ್ಲರ ಬಾಳಿನಲ್ಲಿ ಹಾಸುಹೊಕ್ಕಾಗಬೇಕು. ಇತ್ತೀಚಿನ ದಿನಗಳಲ್ಲಿ ಭಾರತವು ಹಲವಾರು ಕ್ಷೇತ್ರಗಳಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಿದೆ. ಭಾರತವು ವಿಶ್ವದಲ್ಲಿಯೇ ಅತೀ ಪ್ರಾಚೀನ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಹೊಂದಿದೆ ಎಂದು ಹೇಳಿದರು.
ಬಸವಜ್ಯೋತಿ ಯುಥ್ ಫೌಂಡೇಶನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಅವರ ಆದರ್ಶಗಳು ನಮ್ಮೆಲ್ಲರ ಬಾಳಿನಲ್ಲಿ ಹಾಸುಹೊಕ್ಕಾಗಬೇಕು.  ಹಲವಾರು ದೇಶಭಕ್ತರು ತಮ್ಮ ತ್ಯಾಗ ಹಾಗೂ ಬಲಿದಾನಗಳ ಮೂಲಕ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ಹೇಳಿದರು.
ಶಾಲೆಯ ಎಲ್ಲ ವಿದ್ಯಾರ್ಥಿಗಳು ೭೫ ನೇ ಸ್ವಾತಂತ್ರ್ಯ ದಿನಾಚರಣೆಯ ನೇರಪ್ರಸಾರವನ್ನು ಗೂಗಲ್ ಮೀಟ್ ಮೂಲಕ ವಿಕ್ಷಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಬೀರೇಶ್ವರ ಸೊಸಾಯಟಿಯ ಅಧ್ಯಕ್ಷರಾದ ಜಯಾನಂದ ಜಾಧವ, ನಿರ್ದೇಶಕರಾದ ಸುನೀಲ ದೇಶಪಾಡೆ, ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಕಬಾಡೆ, ನಿರ್ದೇಶಕರಾದ ಅನ್ವರ್‌ದಾಡಿವಾಲೆ, ಜ್ಯೋತಿ ಸೋಸೈಟಿಯ ಅಧ್ಯಕ್ಷರಾದ ಚಂದ್ರಕಾಂತ ಖೋತ, ಉಪಾಧ್ಯಕ್ಷರಾದ ಬಾಬುರಾವ ಮಾಳಿ ಕಲ್ಲಪ್ಪಾ ಜಾಧವ, ಪ್ರಧಾನ ವ್ಯವಸ್ಥಾಪಕರು, ಆರ್.ಸಿ ಚೌಗಲಾ, ವಿಜಯ ಖಡಕಭಾವಿ, ಪಬ್ಲಿಕ ಶಾಲೆಯ ಪ್ರಾಂಶುಪಾಲರಾದ ಗೀತಾ ನಾಯ್ಡು, ಜೊಲ್ಲೆ ಎಜ್ಯುಕೇಶನ ಸೊಸಾಯಿಟಿಯ ಸಮನ್ವಯ ಅಧಿಕಾರಿ ಮಹಾದೇವ ಪಾಟೀಲ, ಹಾಗೂ ಸಂಸ್ಥೆಯ ಎಲ್ಲ ನಿರ್ದೇಶಕ ಮಂಡಳಿಯ ಸದಸ್ಯರು ಹಾಗೂ ಎಲ್ಲ ಅಂಗ ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕರು, ಸಹಾಯಕ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂಧಿ ವರ್ಗ, ಶಾಲೆಯ ಮುಖ್ಯೋಪಾಧ್ಯಾಯರು, ಎಲ್ಲ ಸಿಬ್ಬಂಧಿ/ಯೇತರ ವರ್ಗದವರು ಉಪಸ್ಥಿತರಿದ್ದರು. ಸಹಶಿಕ್ಷರಾದ ಎಂ.ಎ. ಸನದಿ ಸ್ವಾಗತಿಸಿ, ನಿರೂಪಿಸಿದರು.

 

ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭ; ಹೊಸ ಯೋಜನೆ ಘೋಷಣೆ

ಧ್ವಜಸ್ಥಂಭ ನಿಲ್ಲಿಸುವಾಗ ದುರ್ಘಟನೆ: ಬಾಲಕನ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button