ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್‌ನಲ್ಲಿ ಸೆ.೧೮ ರಂದು ಬೆಳಿಗ್ಗೆ ೧೦ ಘಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಎಮ್.ಇ.ಎಸ್, ಸಾಂಬ್ರಾ ಹಾಗೂ ಮುತಗಾ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ
ಸೆ.೧೯ ರಂದು ಬೆಳಿಗ್ಗೆ ೧೦ ಘಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಮಾರಿಹಾಳ, ಕರಡಿಗುದ್ದಿ, ಸುಳೇಭಾವಿ, ಪಂತ ನಗರ, ಮೋದಗಾ ಹಾಗೂ ಯದ್ದಲಭಾವಿಹಟ್ಟಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ .
ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳು ತ್ತಿರುವುದರಿಂದ ಸೆಪ್ಟೆಂಬರ್ ೧೮ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.
ಈ ಉಪಕೇಂದ್ರದಿಂದ ಸರಬರಾಜು ಆಗುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಂದಿಗವಾಡ, ಹಿರೇ ಅಂಗ್ರೋಳ್ಳಿ, ಚಿಕ್ಕ ಅಂಗ್ರೊಳ್ಳಿ, ಹಂದೂರ, ಗಾಡಿಕೊಪ್ಪ, ಜಿಕನೂರ, ಪಾರಿಶ್ವಾಡ, ಹುಲಿಕೊತ್ತಲ, ಇಟಗಿ, ಬೋಗೂರ, ಬೇಡರಹಟ್ಟಿ, ತೊಲಗಿ, ಬಿಳಕಿ, ಅವರೊಳ್ಳಿ ಹಾಗೂ ಕಗ್ಗಣಗಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
೧೧೦ ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಗಂದಿಗವಾಡ ಉಪಕೇಂದ್ರದಿಂದ ಸರಬರಾಜು ಆಗುವ ಗಂದಿಗವಾಡ, ಹಿರೇ ಅಂಗ್ರೋಳ್ಳಿ, ಚಿಕ್ಕ ಅಂಗ್ರೊಳ್ಳಿ, ಹಂದೂರ, ಹುಲಿಕೊತ್ತಲ, ಇಟಗಿ, ಬೋಗೂರ, ಬೇಡರಹಟ್ಟಿ, ತೊಲಗಿ, ಬಿಳಕಿ, ಅವರೊಳ್ಳಿ ಹಾಗೂ ಕಗ್ಗಣಗಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಕಾ ಮತ್ತು ಪಾ ಗ್ರಾಮೀಣ ವಿಭಾಗ, ಹುವಿಸಕಂನಿ., ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://pragati.taskdun.com/belgaum-news/power-outage-on-sunday/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ