*ತಹಶಿಲ್ದಾರರ್ ಕಚೇರಿಯಲ್ಲಿ ನೌಕರ ಆತ್ಮಹತ್ಯೆ ಪ್ರಕರಣ: ಡಿಸಿಪಿ ರೋಹನ್ ಜಗದೀಶ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಹಶಿಲ್ದಾರರ್ ಕಚೇರಿಯಲ್ಲಿ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಒಂದು ವೇಲ್ ಮೂಲಕ ನೇಣು ಹಾಕಿಕೊಳ್ಳಲಾಗಿದೆ. ಇನ್ನು ತಹಶೀಲ್ದಾರ್ ಕೊಠಡಿಯಲ್ಲಿ ಸಿಸಿಟಿವಿ ಕಂಡು ಬಂದಿಲ್ಲ. ಹೊರಗಡೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತೇವೆ ಎಂದು ತಹಶಿಲ್ದಾರ್ ಕಚೇರಿಯಲ್ಲಿ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವಾಗಿ ಡಿಸಿಪಿ ರೋಹನ್ ಜಗದೀಶ್ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಟುಂಬಸ್ಥರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳುತ್ತೇವೆ. ಇನ್ನು ವಾಟ್ಸಪ್ ಗ್ರೂಪ್ ನಲ್ಲಿ ಸಾವಿಗೆ ಕಾರಣ ಆದವರ ಹೆಸರನ್ನು ಬರೆದಿರುವ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸೊಶಿಯಲ್ ಮಿಡಿಯಾ, ವಾಟ್ಸಪ್ ಗ್ರೂಪ್ ನಲ್ಲಿ ಹಾಕಿರಬಹುದು. ಆದರೆ, ಸತ್ಯಾಸತ್ಯತೆ ಗೊತ್ತಾಗಬೇಕಾದರೆ ಕೂಲಂಕಷವಾಗಿ ತನಿಖೆ ಆಗಬೇಕು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ