Latest

ಕರ್ನಾಟಕ ಬ್ಯಾಂಕ್ ಚೀಫ್​ ಫೈನಾನ್ಸಿಯಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ 

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕರ್ನಾಟಕ ಬ್ಯಾಂಕ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿ ಆಹ್ವಾನಿಸಿದೆ. ಮಂಗಳೂರಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್(Chief Financial Officer) ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಫೈನಾನ್ಸಿಯಲ್ ಆಪರೇಷನ್ಸ್​ನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಅರ್ಹತಾ ಮಾನದಂಡ,ಅನುಭವ,ವಿದ್ಯಾರ್ಹತೆ & ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ karnatakabank.com ಗೆ ಭೇಟಿ ನೀಡಿ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button