
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿ ಬಾಕಿ ಇರುವ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.
ಪ್ರಧಾನಿ ಮೋದಿಯವರು ಎಲ್ಲಾ ಇಲಾಖೆಗಳ ಸಚಿವಾಲಯಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದ್ದಾರೆ. ವಿವಿಧ ಇಲಾಖೆಗಳ ಉದ್ಯೋಗಿಗಳ ಪರಿಸ್ಥಿತಿ, ಮಾನವ ಸಂಪನ್ಮೂಲದ ಸ್ಥಿತಿಗತಿ ಪರಿಶೀಲಿಸಿ ಮುಂದಿನ ಒಂದುವರೆ ವರ್ಷಗಳ ಅವಧಿಯಲ್ಲಿ 10 ಲಕ್ಷ ಮಂದಿಯನ್ನು ನೇಮಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಟ್ವಿಟರ್ ನಲ್ಲಿ ತಿಳಿಸಿದೆ.
ರಾಜ್ಯಸಭೆಗೆ ಕಳೆದ ಫೆಬ್ರವರಿ ತಿಂಗಳಿನಲ್ಲಿ ಮಾಹಿತಿ ನೀಡಿದ್ದ ಸರ್ಕಾರ ಮಾರ್ಚ್ 1, 2020ಕ್ಕೆ ದೇಶದಲ್ಲಿ ಪ್ರಸ್ತುತ 87 ಲಕ್ಷ ಖಾಲಿ ಹುದ್ದೆಗಳಿವೆ ಎಂದು ಹೇಳಿತ್ತು. ನಿರುದ್ಯೋಗ ಸಮಸ್ಯೆ ಬಗ್ಗೆ ವಿಪಕ್ಷಗಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದವು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ವಿವಿಧ ಸರ್ಕಾರಿ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಬಾಕಿಯಿರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಲು ಮುಂದಾಗಿದ್ದಾರೆ.
ಮತ್ತೆ ಆರಂಭವಾದ ಕೊರೊನಾ ಅಟ್ಟಹಾಸ; 31 ವಿದ್ಯಾರ್ಥಿಗಳಿಗೆ ಸೋಂಕು ದೃಢ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ