
ಪ್ರಗತಿವಾಹಿನಿ ಸುದ್ದಿ, ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷರು ಲವ್ ಜೇಹಾದ್ ಗೆ ಸಂಬಂಧಿಸಿದಂತೆ ಕಾರ್ಯಕರ್ತರಿಗೆ ನೀಡಿದ ಸಲಹೆ ವಿವಾದಗ್ರಸ್ಥವಾದ ಬೆನ್ನಿಗೇ ಲವ್ ಜೇಹಾದ್ ಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಹೊಸ ವಿಷಯವೊಂದನ್ನು ತೆರೆದಿಟ್ಟಿದ್ದಾರೆ.
ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲವ್ ಜೇಹಾದ್ ಗೆ ಸಂಬಂಧಿಸಿದಂತೆ ವಿಶೇಷ ಕಾಯ್ದಿ ಜಾರಿಗೊಳಿಸಬೇಕೇ, ಬೇಡವೇ ಎಂಬ ಚರ್ಚೆ ಪಕ್ಷದ ನಿರ್ಧಾರದ ಹಂತದಲ್ಲಿದೆ. ಆದರೆ ಸದ್ಯಕ್ಕಂತೂ ಆ ಬಗೆಗಿನ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದಿದ್ದಾರೆ.
ನಳೀನ್ ಕುಮಾರ್ ಕಟೀಲ್ ಜೊತೆ ಈ ಕುರಿತು ಚರ್ಚೆ ಮಾಡುವುದಾಗಿ ಕೂಡ ಈ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.
https://pragati.taskdun.com/nalin-kumar-kateellove-jihadstatmentd-k-shivakumarmangalore/
*ಇದೇ ಬಿಜೆಪಿಯ ನಿಜವಾದ ಮುಖ; ಪಕ್ಷದ ಅಜೆಂಡಾವನ್ನೇ ರಾಜ್ಯಾಧ್ಯಕ್ಷರು ಹೇಳಿದ್ದಾರೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ*
https://pragati.taskdun.com/d-k-shivakumarreactionnalin-kumar-kateel-statment/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ