Cancer Hospital 2
Bottom Add. 3

ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ಶ್ಲಾಘನೀಯ: ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಾತ್ರೆ, ಉತ್ಸವಗಳಂಥ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಅಥಣಿ ತಾಲೂಕಿನ ಸುಕ್ಷೇತ್ರ ನಾಗನೂರು ಪಿ.ಕೆ. ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ, ನವರಾತ್ರಿ ಹಾಗೂ ದಸರಾ ಉತ್ಸವ ಪ್ರಯುಕ್ತ ಆಯೋಜಿಸಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಈ ವೇಳೆ ಚನ್ನರಾಜ ಹಟ್ಟಿಹೊಳಿ ಅವರನ್ನು ಸಂಘಟಕರು ಸತ್ಕರಿಸಿದರು. ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ, ಚಲನಚಿತ್ರ ನಟ ಶರಣ್, ಬಾಲಪ್ರತಿಭೆ ದಿಯಾ ಹೆಗಡೆ, ಗ್ರಾಮದ ಹಿರಿಯರು, ಅಥಣಿ ತಾಲೂಕಿನ ಮುಖಂಡರು ಉಪಸ್ಥಿತರಿದ್ದರು.

Bottom Add3
Bottom Ad 2

You cannot copy content of this page