
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2 ಜರಗುತ್ತಿರುವ ಹಿನ್ನಲೆಯಲ್ಲಿ ಜೂ. 14 ರಿಂದ ಜೂ. 22 ರ ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ, ನಿಷೇದಾಜ್ಞೆಯನ್ನು ಹೊರಡಿಸಲಾಗಿರುತ್ತದೆ.
ಬೆಳಗಾವಿ ಜಿಲ್ಲೆಯ 33 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 41 ಒಟ್ಟು 74 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ ಒಳಗಿನ ಝರಾಕ್ಸ್ ಅಂಗಡಿಗಳನ್ನು ಬಂದ ಇರಲಿವೆ, ವಿದ್ಯಾರ್ಥಿಗಳು, ಸರ್ಕಾರಿ ಬಸ್ಸು ಹಾಗೂ ಇತರೆ ವಾಹನಗಳಿಗೆ ಅಡೆತಡೆ ಉಂಟುಮಾಡುವುದನ್ನು, ಶಾಲಾ/ಕಾಲೇಜು ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಶಾಲಾ/ಕಾಲೇಜು ಆವರಣದಲ್ಲಿ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಆದೇಶಿಸಿರುತ್ತಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ