ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇನ್ಸ್ ಪೆಕ್ಟರ್ ಎಂದು ನಂಬಿಸಿ ಜನರಿಂದ ಕಮಿಷನ್ ಹೆಸರಲ್ಲಿ ಹಣ ಪಡೆದು ವಂಚಿಸುತ್ತಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್ ನನ್ನು ಬೆಂಗಳೂರು ಪೊಲಿಸರು ಬಂಧಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಬಂಧಿತ ಆರೋಪಿ. ರೈತರಿಗೆ ಕೆಐಎಡಿಬಿಯಿಂದ ಹಣ ಕೊಡಿಸುತ್ತೇನೆ ಎಂದು ಕಮಿಷನ್ ಹೆಸರಲ್ಲಿ ಹಣ ಪಡೆಯುತ್ತಿದ್ದ ಗಂಗಾಧರ್, ತಾನು ಪೊಲೀಸ್ ಇನ್ಸ್ ಪೆಕ್ಟರ್ ಎಂದು ಹೇಳುತ್ತಿದ್ದ. ಅಲ್ಲದೇ ತನ್ನ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಜಾಗೃತದಳ ಎಂದು ಬೋರ್ಡ್ ಅಳವಡಿಸಿದ್ದ.
ತಾನು ಪೊಲೀಸ್ ಇನ್ಸ್ ಪೆಕ್ಟರ್ ಎಂದು ನಕಲಿ ಐಡಿಯನ್ನು ತೋರಿಸುತ್ತಿದ್ದ. ಹಲವು ವರ್ಷಗಳಿಂದ ಇದೇ ರೀತಿಯಲ್ಲಿ ವಂಚಿಸುತ್ತಿದ್ದ ಗಂಗಾಧರ್ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ