*ಹಾಸ್ಟೇಲ್ ನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಿಟ್ಟೆ ಮೀನಾಕ್ಷಿ ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿ ನಡೆದಿದೆ. ವಿವೇಕ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಹಾಸ್ಟೇಲ್ ರೂಂ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿವೇಕ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇಂಜಿನಿಯರಿಂಗ್ 4ನೇ ಸೆಮಿಸ್ಟರ್ ನಲ್ಲಿ ವಿವೇಕ್ ವ್ಯಾಸಂಗ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://www.pragativahini.com/cm-siddaramaiahreactiongruhalakshmigruhajyoti-scheme/Home add -Advt